ಲೋಕಸಭೆಯಲ್ಲಿ ಭದ್ರತಾ ಲೋಪ: ನಾಲ್ವರ ಗುರುತು ಪತ್ತೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:
 
ಲೋಕಸಭೆ ಕಲಾಪದ ವೇಳೆ ಇಬ್ಬರು ಸಾರ್ವಜನಿಕ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದಾರೆ. ಹಳದಿ ಬಣ್ಣದ ಸ್ಟ್ರೇ ಬಿಡುಗಡೆ ಮಾಡಿ ಆತಂಕ ಸೃಷ್ಟಿಸಿದ್ದಾರೆ. ಅದೇ ಸಮಯದಲ್ಲಿ ಸಂಸತ್ತಿನ ಆವರಣದ ಹೊರಗೆ ಒಬ್ಬ ಮಹಿಳೆ ಸೇರಿದಂತೆ ಮತ್ತಿಬ್ಬರು ಘೋಷಣೆಗಳನ್ನು ಕೂಗುತ್ತಾ ಸ್ಟ್ರೇ ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಇಬ್ಬರನ್ನು ಸದನದ ಒಳಗೆ ಹಾಗೂ ಮತ್ತಿಬ್ಬರನ್ನು ಸಂಸತ್ತಿನ ಹೊರಗೆ ಬಂಧಿಸಲಾಗಿದೆ.

ಲೋಕಸಭೆಗೆ ನುಗ್ಗಿದ ಆರೋಪಿಯನ್ನು ಮನೋರಂಜನ್​ ಎಂದು ಗುರುತಿಸಲಾಗಿದೆ. ಅಲ್ಲದೇ, ಮತ್ತೊಬ್ಬನನ್ನು ಸಾಗರ್​ ಶರ್ಮಾ ಎಂದು ಗುರುತಿಸಲಾಗಿದ್ದು, ಆತನ ಬಳಿಯಿದ್ದ ಸಂದರ್ಶಕರ ಪಾಸ್‌ ಸಹ ಪತ್ತೆಯಾಗಿದೆ. ಇದರಿಂದ ಈತ ಹೆಸರು ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಸತ್ತಿನ ಹೊರಗೆ ನುಗ್ಗ ಪ್ರತಿಭಟನೆಯಲ್ಲಿ ತೊಡಗಿದ್ದ ಮತ್ತಿಬ್ಬರನ್ನೂ ಹೆಸರು ಸಹ ಬಹಿರಂಗವಾಗಿದೆ. ಹರಿಯಾಣದ ಹಿಸಾರ್ ಮೂಲದ 42 ವರ್ಷದ ನೀಲಾಮ್ ಹಾಗೂ ಮಹಾರಾಷ್ಟ್ರದ ಲಾತೂರ್​ ಮೂಲದ 25 ವರ್ಷದ ಅಮೋಲ್​ ಶಿಂಧೆ ಎಂದು ಗುರುತಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!