ಲೋಕಸಭೆಯಲ್ಲಿ ಭದ್ರತಾ ಲೋಪ:ಸರ್ವ ಪಕ್ಷಗಳ ಕರೆದ ಸ್ಪೀಕರ್ ಓಂ ಬಿರ್ಲಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಕಲಾಪದ ವೇಳೆ ಉಂಟಾದ ಭದ್ರತಾ ಲೋಪ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ತಿಳಿಸಿದರು.

ಈ ವಿಷಯದ ಬಗ್ಗೆ ತಮ್ಮ ಕಳವಳಗಳನ್ನು ತಿಳಿಸಲು ಸರ್ವ ಪಕ್ಷಗಳ ಸಂಸದರ ಸಭೆಯನ್ನು ಸ್ಪೀಕರ್ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಜೆ 4 ಗಂಟೆಯವರೆಗೆ ಕಲಾಪ ಮುಂದೂಡಲಾಗಿದೆ.

ಹಳೆ ಸಂಸತ್ತು ಭವನದ ಮೇಲಿನ ಭಯೋತ್ಪಾದನಾ ದಾಳಿಯ 22ನೇ ವರ್ಷದ ಕರಾಳ ದಿನದಂದೇ ಲೋಕಸಭೆಯಲ್ಲಿ ಈ ಭಾರಿ ಭದ್ರತಾ ಲೋಪ ಉಂಟಾಗಿದೆ. ಸುಮಾರು 1 ಗಂಟೆ ಸುಮಾರಿಗೆ ಲೋಕಸಭೆಯಲ್ಲಿ ಸದಸ್ಯರು ಶೂನ್ಯ ವೇಳೆಯಲ್ಲಿ ಮಾತನಾಡುತ್ತಿದ್ದಾಗಲೇ ಇಬ್ಬರು ಸಾರ್ವಜನಿಕ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದಾರೆ. ಹಳದಿ ಬಣ್ಣದ ಸ್ಟ್ರೇ ಬಿಡುಗಡೆ ಮಾಡಿ ಆತಂಕ ಸೃಷ್ಟಿಸಿದ್ದಾರೆ. ಅದೇ ಸಮಯದಲ್ಲಿ ಸಂಸತ್ತಿನ ಆವರಣದ ಹೊರಗೆ ಒಬ್ಬ ಮಹಿಳೆ ಸೇರಿದಂತೆ ಮತ್ತಿಬ್ಬರು ಘೋಷಣೆಗಳನ್ನು ಕೂಗುತ್ತಾ ಸ್ಟ್ರೇ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!