ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್‌ಗೆ ಪ್ರಧಾನಿ ಮೋದಿ ಭೇಟಿ ವೇಳೆ ‘ಭದ್ರತಾ ಲೋಪ’ದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ.
ಲಾಯರ‍್ಸ್ ವೈಸ್ ಸಂಸ್ಥೆ ಅರ್ಜಿ ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಿದೆ.
ಲಾಯರ‍್ಸ್ ವೈಸ್ ಪರ ಅರ್ಜಿ ಸಲ್ಲಿಸಿದ ಹಿರಿಯ ವಕೀಲ ಮಣೀಂದರ್ ಸಿಂಗ್, ಪ್ರಧಾನಿ ಮೋದಿ ಭದ್ರತೆಯಲ್ಲಿ ಲೋಪವಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಅಷ್ಟೇ ಅಲ್ಲ, ಇದು ವಿಶೇಷ ರಕ್ಷಣಾ ಗುಂಪುಗಳ ಕಾಯ್ದೆ ಅನ್ವಯ ಬರುವ ವಿಷಯ. ರಾಷ್ಟ್ರೀಯ ಭದ್ರತೆಗೆ ಸಂಬಂಧಪಟ್ಟ ವಿಚಾರ ಇದಾಗಿದೆ ಎಂದಿದ್ದಾರೆ.