ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ಉಗ್ರ ದಾಳಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ನಿವಾಸದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋವಲ್ ಮತ್ತು ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಅನಿಲ್ ಚೌಹಾಣ್ ಸೇರಿದಂತೆ ಪ್ರಮುಖ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಮತ್ತು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ 7, ಲೋಕ ಕಲ್ಯಾಣ ಮಾರ್ಗ್‌ನಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಅನಿಲ್ ಚೌಹಾಣ್ ರಕ್ಷಣಾ ಸಚಿವರಿಗೆ ಕೆಲವು ನಿರ್ಧಾರಗಳ ಕುರಿತು ಮಾಹಿತಿ ನೀಡಿದ ಒಂದು ದಿನದ ನಂತರ ಈ ಸಭೆ ನಡೆಯಿತು.