ಭದ್ರತಾ ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರು: ವಿಮಾನ ಸಂಚಾರ ರದ್ದು, ಪ್ರಯಾಣಿಕರ ಪರದಾಟ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜರ್ಮನಿಯ ಪ್ರಮುಖ ವಿಮಾನ ನಿಲ್ದಾಣಗಳ ಭದ್ರತಾ ಸಿಬ್ಬಂ‌ದಿ ದಿಡೀರ್ ಪ್ರತಿಭಟನೆ ನಡೆಸಿದ್ದರಿಂದ ಹಲವು ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಯಿತು. ಇದರಿಂದಾಗಿ ಲಕ್ಷಾಂತರ ಪ್ರಯಾಣಿಕರು ಪರದಾಡಿದರು.

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ವೆರ್‌.ಡಿ ಯೂನಿಯನ್’ ಪ್ರತಿಭಟನೆಗೆ ಕರೆಕೊಟ್ಟಿತ್ತು.ಫ್ರಾಂಕ್‌ಫರ್ಟ್‌, ಬರ್ಲಿನ್‌, ಕೊಲಾಗ್ನೆ, ಹಂಬರ್ಗ್, ಸ್ಟಟ್ಟ್‌ಗರ್ಟ್, ಲೇಪ್ಸಿಗ್, ಹನ್ನೊವೆರ್, ಡ್ರೆಸ್ಡೆನ್, ಬ್ರೆಮೆನ್‌ ಮತ್ತು ಎರ್ಫರ್ಟ್ ವಿಮಾನ ನಿಲ್ದಾಣಗಳ ಭದ್ರತಾ ಸಿಬ್ಬಂದಿ ಗುರುವಾರ ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆ ನಡೆಸಿದರು.

‘ವಿಮಾನ ನಿಲ್ದಾಣ ನಿಯಂತ್ರಣ ತಂಡ ‘ಎಡಿವಿ’ ಪ್ರಕಾರ 1,100 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಮತ್ತು ಮುಂದೂಡಲಾಗಿದೆ. ಇದರಿಂದ ಸುಮಾರು ಎರಡು ಲಕ್ಷ ಪ್ರಯಾಣಿಕರು ಪರಾದಾಡಿದರು’ ಎಂದು ಜರ್ಮನ್ ಸುದ್ದಿ ಸಂಸ್ಥೆ ಡಿಪಿಎ ವರದಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!