ಮತ ಚಲಾಯಿಸಿದ ಸೇಡಂ ಬಿಜೆಪಿ ಅಭ್ಯರ್ಥಿ ರಾಜಕುಮಾರ್ ಪಾಟೀಲ್ ತೇಲ್ಕೂರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಇಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಜೋರಾಗಿ ಸಾಗಿದೆ. ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನ ಪ್ರಕ್ರಿಯೆಯಲ್ಲಿ ಬೆಳಿಗ್ಗೆಯಿಂದ ಜನರು ಹುಮ್ಮಸ್ಸಿನಲ್ಲಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡುತ್ತಿದ್ದು,ಕಲಬುರಗಿ ಜಿಲ್ಲೆಯ ಸೇಡಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಕುಮಾರ್ ಪಾಟೀಲ್ ತೇಲ್ಕೂರ ಅವರು ವಿದ್ಯಾನಗರ ಮತಗಟ್ಟೆಯ ಬೂತ್ ಸಂಖ್ಯೆ 112ರಲ್ಲಿ ತಮ್ಮ ಮತವನ್ನು ಚಲಾಯಿಸಿದರು.

ಅವರೊಂದಿಗೆ ಅವರ ಧಮ೯ ಪತ್ನಿಯಾದ ಸಂತೋಷಿ ರಾಣಿ ಪಾಟೀಲ್ ತೇಲ್ಕೂರ ಸಹ ತಮ್ಮ ಮತದಾನವನ್ನು ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!