ಶಹಬಾಜ್ ವಿರುದ್ಧ ದೇಶದ್ರೋಹ ಕೇಸ್: ಇಮ್ರಾನ್ ಖಾನ್ ಗೆ ಹೊಸ ಸಂಕಷ್ಟ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾಗಿ ಪಾಕಿಸ್ಥಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಿಬ್ಬಂದಿ ಮುಖ್ಯಸ್ಥ ಶಹಬಾಜ್ ಗಿಲ್ ಬಂಧನವಾಗಿದ್ದು, ಇದರೊಂದಿಗೆ ಇಮ್ರಾನ್ ಖಾನ್‌ಗೆ ಮತ್ತೆ ಹೊಸ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಪಂಜಾಬ್ ಪ್ರಾಂತ್ಯದಲ್ಲಿ ಉಪಚುನಾವಣೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಅಲ್ಲಿನ ಮುಜಫರ್‌ಗಢದಿಂದ ಗಿಲ್ ಬಂಧನವಾಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪಾಕಿಸ್ಥಾನಿ ಸಶಸ್ತ್ರ ಪಡೆಯಲ್ಲಿ ಬಂಡಾಯಕ್ಕೆ ಕರೆ ನೀಡಿದ ಬೆನ್ನಲ್ಲೇ ಗಿಲ್ ಬಂಧನವಾಗಿದೆ. ಇದಕ್ಕೂ ಮೊದಲು ಗಿಲ್, ಪಾಕ್ ಸೇನಾ ಅಧಿಕಾರಿಗಳಿಗೆ ತಮ್ಮ ಉನ್ನತಾಧಿರಗಳ ಆಜ್ಞೆಯ ಕೆಲ ಆದೇಶಗಳನ್ನು ತಿರಸ್ಕರಿಸುವಂತೆ ಕರೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!