ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಇದರ ನಡುವೆ ಇಂದು ಸಹ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಭಾಗಗಳಲ್ಲಿ ಗಾಳೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಕರಾವಳಿ ಭಾಗಗಳಲ್ಲಿ ಭಾರೀ ಗಾತ್ರದ ಅಲೆಗಳು ಏಳುತ್ತಿದ್ದು ಜನರು ಸಮುದ್ರ ತೀರಕ್ಕೆ ಹೋಗದಂತೆ ಇಲಾಖೆ ಎಚ್ಚರಿಸಿದೆ.