ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂತಾರದ ಚೆಲುವೆ ಸಪ್ತಮಿ ಗೌಡ ತಮ್ಮ ಅಭಿಮಾನಿಗಳಿಗೆ ಹೊಸ ಸುದ್ದಿ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಶ್ರೀರಸ್ತು ಶುಭಮಸ್ತು ಧಾರವಾಹಿಯ ಮೂಲಕ ಅವರು ಕಿರುತೆರೆಗೂ ಎಂಟ್ರಿ ನೀಡುತ್ತಿದ್ದಾರೆ. ಈಗಾಗಲೇ ಕನ್ನಡ ಮಾತ್ರವಲ್ಲದೆ ಬಾಲಿವುಡ್‌ನಲ್ಲಿಯೂ ಮಿಂಚಿರುವ ‘ಲೀಲಾ’, ತಮ್ಮ ಬಿಝೀ ಶೆಡ್ಯೂಲ್‌ನ ನಡುವಿನಲ್ಲೂ ಈ ಧಾರವಾಹಿಯಲ್ಲಿ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಸಂಚಿಕೆಯ ಪ್ರೋಮೋ ರಿವೀಲ್ ಆಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.