VIDEO | ಒಂಬತ್ತು ತಿಂಗಳ ನಂತರ ಭೂಮಿಗೆ ಎಂಟ್ರಿ, ಸುನೀತಾ ಬಂದಿಳಿದ ಕ್ಷಣ ಹೇಗಿತ್ತು ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಾಹ್ಯಾಕಾಶದಲ್ಲಿ ಸಿಲುಕಿಕೊಂಡ ನಾಸಾ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಮಂಗಳವಾರ ಭೂಮಿಗೆ ಮರಳಿದ್ದು, 9 ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ವಾಪಸ್ಸಾಗಿದ್ದಾರೆ.

ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ ತೊಂದರೆಗಳು ಮತ್ತು ವೇಳಾಪಟ್ಟಿಯಲ್ಲಿನ ಬದಲಾವಣೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಕೆಲವೇ ದಿನಗಳ ಈ ಕಾರ್ಯಾಚರಣೆ 9 ತಿಂಗಳಿಗೆ ವಿಸ್ತರಣೆಗೊಂಡಿತ್ತು.

ಕೇವಲ ಒಂದು ವಾರದ ಮಟ್ಟಿಗೆ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಅಲ್ಲಿಗೆ ಪ್ರಯಾಣಿಸಿದ್ದರು. ಆದರೆ, ಅವರಿದ್ದ ಬೋಯಿಂಗ್ ಸ್ಟಾರ್‌ಲೈನರ್ ನೌಕೆಯಲ್ಲಿ ದೋಷ ಕಂಡುಬಂದಿತ್ತು. ಇದರಿಂದಾಗಿ ಸುನೀತಾ ಮತ್ತವರ ಸಹ ಗಗನಯಾತ್ರಿಗಳು ನೌಕೆಯ ಮೂಲಕ ಹಿಂತಿರುಗುವುದು ಅಪಾಯ ಎಂದು ನಾಸಾ ತಿಳಿಸಿತ್ತು.

ಹಾಗಾಗಿ, ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ಮರಳುವುದನ್ನು ಕಾಯಲಾಗುತ್ತಿತ್ತು. ಈ ಕಾಯುವಿಕೆ ಇದೀಗ ಇಬ್ಬರೂ ಸುರಕ್ಷಿತವಾಗಿ ಮರಳುವುದರೊಂದಿಗೆ ಕೊನೆಗೊಂಡಿದೆ. ಸುನೀತಾ ಭೂಮಿಗೆ ಬಂದಿಳಿದ ವಿಡಿಯೋ ಇಲ್ಲಿದೆ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!