‘ಬಿಜೆಪಿ ಅಭಿವೃದ್ಧಿ ಕಾರ್ಯ ನೋಡಿ ಎಚ್‌ಡಿಕೆ, ಸಾರಾ ಮಹೇಶ್‌ಗೆ ಹೊಟ್ಟೆಕಿಚ್ಚು’

ಹೊಸದಿಗಂತ ವರದಿ ಹುಬ್ಬಳ್ಳಿ:

ಬಿಜೆಪಿ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜಿಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ‌ ಹಾಗೂ ಸಾರಾ ಮಹೇಶ ಅವರಿಗೆ ಹೊಟ್ಟೆಕಿಚ್ಚಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಜೆಡಿಎಸ್ ನಾಯಕರ ವಿರುದ್ಧ ಹರಿಹಾದರು.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಎಚ್ ಡಿ. ಕುಮಾರಸ್ವಾಮಿಯವರ ಕುಟುಂಬ ಸರ್ಕಾರದ ಹಲವೂ ಉನ್ನತ ಹುದ್ದೆಯಲ್ಲಿದ್ದರೂ ಸಹ ಕೆಂಪೆಗೌಡರ ಪ್ರತಿಮೆ ಸ್ಥಾಪಿಸಿಲ್ಲ. ಯಾವುದೇ ರೀತಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಬಿಜೆಪಿ ಅವರ ಅಭಿವೃದ್ಧಿ ಕಾರ್ಯ ಮಾಡುತ್ತಿರುವುದು ಅವರಿಗೆ ಸಹಿಸಲಾಗುತ್ತಿಲ್ಲ ಎಂದರು.

ಕೆಂಪೆಗೌಡರ ಪ್ರತಿಮೆ ಅನಾವರಣಕ್ಕೆ ಎಚ್.ಡಿ. ದೇವೆಗೌಡರ ಆಮಂತ್ರಿಸಿಲ್ಲ ಎಂಬುದು ಸುಳ್ಳು. ಸ್ವತಃ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ಮಾಡಿದ್ದಾರೆ. ಆದರೂ ಅವರು ಬಂದಿಲ್ಲ. ಯಾಕೇ ಬಂದಿಲ್ಲ ಎಂದು ಗೊತ್ತಿಲ್ಲ ಎಂದರು.

ಇನ್ನೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿಯವರ ನೆರಳು ತಾಕಿದೆ. ಪಾದಯಾತ್ರೆಯಲ್ಲಿ ಅವರೊಂದಿಗೆ ಭಾಗವಹಿಸಿದಾಗಿನಿಂದ ಅವರು ರಾಹುಲ್ ಗಾಂಧಿಯವರ ಹಾಗೇ ಮಾತನಾಡುತ್ತಿದ್ದಾರೆ. ಬಿಜೆಪಿಯವರು ಏನು ಮಾಡಿದೆ ಎಂದು ಸಿದ್ದರಾಮಯ್ಯ ಅವರು ಕೇಳುತ್ತಿದ್ದು, ಕಳೆದ ೫೦ ವರ್ಷದಲ್ಲಿ ಮಾಡದ ಅಭಿವೃದ್ಧಿ ಕಾರ್ಯ ಕೇವಲ ೭ ವರ್ಷದಲ್ಲಿ ಬಿಜೆಪಿ ಮಾಡಿದೆ ಎಂದು ತಿಳಿಸಿದರು.

ಕಾಂಗ್ರೆಸ್ ದೇಶದಲ್ಲಿ ಏನು ಮಾಡಿಲ್ಲ ಎಂಬ ಕಾರಣಕ್ಕೆ ಜನರು ಅವರನ್ನು ಕಡೆಗಣಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಎಲ್ಲ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ ಎಂದರು.

ಮೈಸೂರಿನಲ್ಲಿ ತನ್ವೀರ ಸೇಟ್ ಟಿಪ್ಪು ಪ್ರತಿಮೆ ಸ್ಥಾಪಿಸಿದರೆ ಅದಕ್ಕೆ ಬೆಂಬಲ ನೀಡಿದವರಿಗೂ ಜನರ ತಕ್ಕ ಉತ್ತರ ನೀಡುತ್ತಾರೆ. ಪ್ರತಿಮೆ ಸ್ಥಾಪನೆಗೆ ಸರ್ಕಾರದ ಅನುಮತಿ ಬೇಕಾಗುತ್ತದೆ. ಅದಕ್ಕೆ ನಮ್ಮ ವಿರೋಧವಿದೆ. ಟಿಪ್ಪು ಒಬ್ಬ ಮತಾಂಧ, ಹಿಂದೂ ವಿರೋಧಿ, ದೇಶ ದ್ರೋಹಿ ಹಾಗೂ ಕನ್ನಡ ವಿರೋಧಿ ಎಂಬುವುದು ಪಕ್ಷದ ಸ್ಪಷ್ಟ ನಿಲುವಾಗಿದೆ. ರಾಜಕೀಯ ತೃಷ್ಟಿಕರಣಕ್ಕಾಗಿ ಕಾಂಗ್ರೆಸ್ ನವರು ಈ ರೀತಿ ಮಾಡುತ್ತಿದ್ದಾರೆ ಎಂದು ಹೇಳಿದರು.

ಕೆಂಪೆಗೌಡ ಮೂರ್ತಿ ಅನಾವರಣ ಕಾರ್ಯ ಕ್ರಮಕ್ಕೆ ಎಚ್.ವಿಶ್ವನಾಥ ಬಾರದಿರುವ ಕಾರಣಕ್ಕೆ ಅವರು ಹಾಗೇ ಮಾತನಾಡಿದ್ದಾರೆ. ಅವರಿಗೆ ಆಮಂತ್ರಣ ನೀಡಿದರು ಸಹ ಬಂದಿಲ್ಲ.‌ ಯಾಕೇ ಬಂದಿಲ್ಲ ಎಂದು ಪಕ್ಷ ಪರಿಶೀಲಿಸುತ್ತದೆ ಬಳಿಕ ಅವರು ಸುಧಾರಿಸುತ್ತಾರೆ ಎಂದು ಎಚ್ ವಿಶ್ವನಾಥ ಅವರು ಕೆಂಪೆಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮ ಬಿಜೆಪಿದಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!