ಪಾದಯಾತ್ರೆಗೆ ದೊರೆಯುತ್ತಿರುವ ಜನಬೆಂಬಲ ಕಂಡು ಸಿಎಂ ಡಿ.ಕೆ.ಶಿವಕುಮಾರ್ ಹತಾಶೆ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಹೊಸದಿಗಂತ ವರದಿ ಕೊಪ್ಪಳ:  ‘ಬಳ್ಳಾರಿ ಚಲೋ’ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ದಿನದಿಂದ ದಿನಕ್ಕೆ ಜನಾಂದೋಲನವಾಗಿ ಪರಿವರ್ತನೆಯಾಗುತ್ತಿದೆ ಎಂದು ವಿಜಯೇಂದ್ರ ಹೇಳಿದರು. ಪಾದಯಾತ್ರೆಗೂ ಮುನ್ನ ಕಾರಟಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಾದಯಾತ್ರೆಗೆ ದೊರೆಯುತ್ತಿರುವ ಜನಬೆಂಬಲ ಕಂಡು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. ನಮ್ಮ ಹೋರಾಟದ ಪರಿಣಾಮವಾಗಿಯೇ ಮುಖ್ಯಮಂತ್ರಿಗಳು ಹೆಲಿಕಾಪ್ಟರ್ ಮೂಲಕ ಬರ ಪರಿಶೀಲನೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಜೀವನದಲ್ಲಿ ಮೊದಲ ಬಾರಿಗೆ ಹಸಿರು ಶಾಲು ಹಾಕಿಕೊಂಡು ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. … Continue reading ಪಾದಯಾತ್ರೆಗೆ ದೊರೆಯುತ್ತಿರುವ ಜನಬೆಂಬಲ ಕಂಡು ಸಿಎಂ ಡಿ.ಕೆ.ಶಿವಕುಮಾರ್ ಹತಾಶೆ: ಬಿ.ವೈ.ವಿಜಯೇಂದ್ರ ವಾಗ್ದಾಳಿ