ಹೊಸದಿಗಂತ ಡಿಜಿಟಲ್ ಡೆಸ್ಕ್:
ಆನ್ಲೈನ್ ಗೇಮಿಂಗ್ ಆ್ಯಪ್ ಮೂಲಕ ಪರಿಚಯವಾಗಿ ಪ್ರಿಯಕರನಿಗಾಗಿ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.
ಗ್ರೇಟರ್ ನೋಯ್ಡಾದಲ್ಲಿರುವ ಕೃಷ್ಣ ಆಸ್ಪತ್ರೆಯಲ್ಲಿ ಹೆಣ್ಣುಮಗುವಿಗೆ ಜನ್ಮನೀಡಿದರು.
ಸೀಮಾ ಹೈದರ್ ಆನ್ಲೈನ್ ಗೇಮಿಂಗ್ ಮೂಲಕ ಸಚಿನ್ ಎಂಬುವವರನ್ನು ಭೇಟಿಯಾಗಿದ್ದರು, ಬಳಿಕ ಅವರ ಸ್ನೇಹ ಪ್ರೀತಿಗೆ ಚಿಗುರಿತ್ತು. ಸೀಮಾಗೆ ಆಗಲೇ ಮದುವೆಯಾಗಿ ನಾಲ್ಕು ಮಕ್ಕಳಿದ್ದರು. ಆದ್ರೆ ಪ್ರೀತಿಸಿದವನಿಗಾಗಿ ಸೀಮಾ ಗಂಡನನ್ನು ಬಿಟ್ಟು ಮಕ್ಕಳನ್ನು ಕರೆದುಕೊಂಡು ಭಾರತಕ್ಕೆ ಬಂದು ಮದುವೆಯಾಗಿದ್ದಳು. ಪ್ರಸ್ತುತ ಗ್ರೇಟರ್ ನೋಯ್ಡಾದ ರಬುಪುರದಲ್ಲಿ ವಾಸಿಸುತ್ತಿರುವ ಈ ದಂಪತಿ ಸಂತೋಷದ ಜೀವನ ನಡೆಸುತ್ತಿದ್ದಾರೆ.