ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಸರತ್ತು: ಇಂದು ದಿಲ್ಲಿಯತ್ತ ಸಿಎಂ ಸಿದ್ದು ಪ್ರಯಾಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ರಾಜಕೀಯ ಪಕ್ಷಗಳಿಂದ ಪ್ರಚಾರ ಭರದಿಂದ ಸಾಗುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ಇನ್ನೂ ಕಗ್ಗಂಟಾಗಿ ಉಳಿದಿದೆ.

ಮೊದಲ ಹಂತದಲ್ಲಿ 95 ಅಭ್ಯರ್ಥಿಗಳನ್ನ ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ದೆಹಲಿಯಲ್ಲಿ ಸಭೆಗಳ ಮೇಲೆ ಸಭೆ ನಡೆಸುತ್ತಿದೆ.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಾಲೋಚನಾ ಸಭೆಗಳು ನಡೆಯುತ್ತಿದ್ದು, ಅದರಲ್ಲಿ ಭಾಗವಹಿಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!