ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸಮರ್ಥ ವ್ಯಕ್ತಿಯ ಆಯ್ಕೆ: ಶಾಸಕ ಪ್ರಭು ಚವ್ಹಾಣ

ಹೊಸದಿಗಂತ ವರದಿ ಬೀದರ್ :

ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿ ನೇಮಕಗೊಂಡ ಆರ್.ಅಶೋಕ್ ಅವರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಪಕ್ಷದ ವರಿಷ್ಠರಿಂದ ರಾಜ್ಯ ವಿಧಾನಸಭೆಯ ವಿರೋಧಪಕ್ಷ ನಾಯಕನನ್ನು ಆಯ್ಕೆ ಮಾಡುವಲ್ಲಿ ಸ್ವಲ್ಪ ವಿಳಂಬ ಆದರೂ ಸಮರ್ಥ ವ್ಯಕ್ತಿಯನ್ನು ನೇಮಕ ಮಾಡಿದ್ದಾರೆ. ರಾಜ್ಯದ ಉಪ ಮುಖ್ಯಮಂತ್ರಿಯಾಗಿ, ವಿವಿಧ ಇಲಾಖೆಗಳ ಸಚಿವರಾಗಿ ಸಾಕಷ್ಟು ಮಹತ್ವದ ಯೋಜನೆಗಳನ್ನು ಜಾರಿಗೆ ತಂದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ಆರ್.ಅಶೋಕ ಅವರನ್ನು ವಿರೋಧ ಪಕ್ಷದ ನಾಯಕನ ಜವಾಬ್ದಾರಿ‌‌‌ ವಹಿಸಿರುವುದಕ್ಕೆ ಪಕ್ಷಕ್ಕೆ ಹೊಸ‌‌ ಶಕ್ತಿ ಸಿಕ್ಕಂತಾಗಿದೆ ಎಂದಿದ್ದಾರೆ.

ಜವಾಬ್ದಾರಿಯನ್ನು ಸಮರ್ಥವಾಗಿ ಎದುರಿಸುವ ಜಾಣ್ಮೆ, ಸಂಘಟನಾ ಚತುರತೆ ಮತ್ತು ಸಾಕಷ್ಟು ಅನುಭವ ಹೊಂದಿರುವ ಆರ್.ಅಶೋಕ್ ಅವರು ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರ‌ಕ್ಕೆ‌ ಬಂದಾಗಿನಿಂದಲೂ ಒಂದಿಲ್ಲೊಂದು ವಿವಾದಗಳಿಗೆ ಸಿಲುಕುತ್ತಿದೆ. ಚುನಾವಣೆ ಭರವಸೆಗಳನ್ನು ಈಡೇರಿಸಲು ಒದ್ದಾಡುತ್ತಾ, ಜನ ವಿರೋಧಿ ನಿಲುವುಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಸರ್ಕಾರ ಮಾಡುತ್ತಿರುವ ಭ್ರಷ್ಟಾಚಾರ, ದುರಾಡಳಿತದ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡುತ್ತೇವೆ. ಜನಸಾಮಾನ್ಯರ ಧ್ವನಿಯನ್ನು ವಿಧಾನಸಭೆಯಲ್ಲಿ ಪ್ರತಿಧ್ವನಿಸುವ ಕೆಲಸವನ್ನು ಆರ್.ಅಶೋಕ ಅವರ ನೇತೃತ್ವದಲ್ಲಿ ಸಮರ್ಥವಾಗಿ ನಿಭಾಯಿಸಲಾಗುವುದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!