ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ ತೀರ್ಮಾನ ಅಂತಿಮವಾಗಿಲ್ಲ: ಸಚಿವ ಎನ್.ಚಲುವರಾಯಸ್ವಾಮಿ

 ಹೊಸದಿಗಂತ ವರದಿ, ಮಂಡ್ಯ :

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ತೀರ್ಮಾನವೇ ಅಂತಿಮವಲ್ಲ. ಸಮ್ಮೇಳನಾಧ್ಯಕ್ಷರ ಆಯ್ಕೆಯಲ್ಲಿ ಪರಂಪರೆಯನ್ನು ನಾವು ಮರೆಯುವಂತಿಲ್ಲ. ಸಾಹಿತಿಗಳಿಗೇ ಪ್ರಾತಿನಿಧ್ಯತೆ ನೀಡಬೇಕಿದೆ. ಆಯ್ಕೆಯಲ್ಲಿ ಯಾವುದೇ ವೈರುಧ್ಯಗಳು ಎದುರಾಗದಂತೆ ಎಚ್ಚರ ವಹಿಸುವುದಾಗಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಸಮ್ಮೇಳನಕ್ಕೆ ಸರ್ಕಾರ 30 ಕೋಟಿ ರೂ . ನೀಡುತ್ತಿದೆ. ಪರಿಷತ್ ಅಧ್ಯಕ್ಷರು ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದಿಲ್ಲ. ಜಿಲ್ಲಾಡಳಿತ, ಶಾಸಕರು ಎಲ್ಲರೂ ಇರುತ್ತಾರೆ. ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಸಾಹಿತಿಗಳು-ಸಾಹಿತ್ಯೇತರರ ಕುರಿತು ಏನೇ ಚರ್ಚೆ ನಡೆದರೂ ಅಂತಿಮ ತೀರ್ಮಾನ ಒಳ್ಳೆಯದಾಗಿರುತ್ತದೆ ಎಂದು ಭರವಸೆ ನೀಡಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!