Wednesday, November 30, 2022

Latest Posts

ಅ.30ರಂದು ಕೊಡಗು ಜಿಲ್ಲಾ ಜೂನಿಯರ್ ಕಬಡ್ಡಿ ತಂಡಕ್ಕೆ ಆಯ್ಕೆ ಪ್ರಕ್ರಿಯೆ

ಹೊಸದಿಗಂತ ವರದಿ ಮಡಿಕೇರಿ:

ಕರ್ನಾಟಕ ರಾಜ್ಯ ಆಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ನ.11ರಿಂದ 13ರವರೆಗೆ ಬೆಂಗಳೂರಿನಲ್ಲಿ ನಡೆಯುವ ಬಾಲಕ-ಬಾಲಕಿಯರ ಜೂನಿಯರ್ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಲು ಕೊಡಗು ತಂಡದ ಆಟಗಾರರ ಆಯ್ಕೆ ಪ್ರಕ್ರಿಯೆ ಅ.30ರಂದು ನಡೆಯಲಿದೆ.

ಅಂದು ಬೆಳಗ್ಗೆ 10ಗಂಟೆಗೆ ಕುಶಾಲನಗರದ ಜ್ಞಾನ ಭಾರತೀ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಕ್ರೀಡಾಪಟುಗಳು 2002ರ ಜನವರಿ ಒಂದರ ನಂತರದಲ್ಲಿ ಜನಿಸಿರುವವರಾಗಿರಬೇಕು. ಆಯ್ಕೆಗೆ ಬರುವ ಕ್ರೀಡಾಪಟುಗಳು ವಯಸ್ಸಿನ ದೃಢೀಕರಣಕ್ಕೆ ಸೂಕ್ತ ದಾಖಲೆಯ ಜೊತೆಗೆ ಕ್ರೀಡಾ ಸಮವಸ್ತ್ರದೊಂದಿಗೆ ಹಾಜರಿರಬೇಕು ಎಂದು ಕೊಡಗು ಜಿಲ್ಲಾ ಆಮೆಚೂರ್ ಕಬಡ್ಡಿ ಅಸೋಸಿಯೇಷನ್’ನ ಪ್ರಧಾನ ಕಾರ್ಯದರ್ಶಿ ಕಪಿಲ್ ಕುಮಾರ್ ದುಗ್ಗಳ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಕಪಿಲ್ (9731009841) ಮಧು (94838 25085), ಮಣಿಕಂಠ (94828 63707) ಅವರನ್ನು ಸಂಪರ್ಕಿಸಬಹುದೆಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!