ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರ ಸಬಲೀಕರಣ ಸಾಧಿಸುವ ಗುರಿ : ಸಚಿವ ಅಶ್ವತ್ಥನಾರಾಯಣ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರಕಾರವು ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರ ಸಬಲೀಕರಣ ಸಾಧಿಸುವ ಗುರಿ ಹೊಂದಿದ್ದು, ಇದಕ್ಕಾಗಿ ಈ ವರ್ಷ 500 ಕೋ.ರೂ. ಘೋಷಿಸಲಾಗಿದೆ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಚಿತ್ರಕಲಾ ಪರಿಷತ್ತಿನಲ್ಲಿ ಏರ್ಪಡಿಸಿರುವ ಹತ್ತು ದಿನಗಳ ‘ಅಸ್ಮಿತೆ’ ವ್ಯಾಪಾರ ಮತ್ತು ಪ್ರದರ್ಶನ ಮೇಳವನ್ನು ಅವರು ಗುರುವಾರ ಉದ್ಘಾಟಿಸಿ ಮಾತನಾಡಿ, ನ.10ರವರೆಗೆ ನಡೆಯಲಿರುವ ಈ ಮೇಳದಲ್ಲಿ ರಾಷ್ಟ್ರೀಯ ಗ್ರಾಮೀಣ ಮತ್ತು ನಗರ ಜೀವನೋಪಾಯ ಅಭಿಯಾನದ ಭಾಗವಾಗಿರುವ ಸ್ವಸಹಾಯ ಸಂಘಗಳ ಮಹಿಳೆಯರು ಮನೆಯಲ್ಲೇ ತಯಾರಿಸಿದ ಹಲವು ಉತ್ಪನ್ನಗಳ ಮಾರಾಟ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರ ಸಬಲೀಕರಣಕ್ಕೆ ಅಪಾರ ಮಹತ್ವ ನೀಡುತ್ತಿದ್ದಾರೆ. ಹೀಗಾಗಿ ಸ್ವಸಹಾಯ ಸಂಘಗಳಿಗೆ ಕೇಂದ್ರ ಸರ್ಕಾರವು ಶೇ.60ರಷ್ಟು ಹಣ ನೀಡುತ್ತಿದೆ. ಉಳಿದ ಶೇ.40ರಷ್ಟು ಹಣವನ್ನು ಮಾತ್ರ ರಾಜ್ಯ ಸರ್ಕಾರ ಕೊಡುತ್ತಿದೆ ಎಂದು ಅವರು ತಿಳಿಸಿದರು.

ಈ ಸ್ವಸಹಾಯ ಸಂಘಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ಅಮೆಜಾನ್, ಫ್ಲಿಪ್ಕಾರ್ಟ್ ತರಹದ ಕಂಪನಿಗಳ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಪೈಕಿ ಅಮೆಜಾನ್ ಕಂಪನಿಯು 75 ಸಾವಿರ ಕೋಟಿ ರೂಪಾಯಿ ಮೌಲ್ಯದ ಮಾರುಕಟ್ಟೆ ಒದಗಿಸುವ ಭರವಸೆ ನೀಡಿದೆ ಎಂದು ಅವರು ನುಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!