Tuesday, August 16, 2022

Latest Posts

ಮೇ.18-23 ರವರೆಗೆ ಯಾದಗಿರಿ ಜಿಲ್ಲೆಯಲ್ಲಿ ಸ್ವಯಂಘೋಷಿತ ಬಂದ್: ಉಸ್ತುವಾರಿ ಸಚಿವ ಆರ್.ಶಂಕರ್ ಘೋಷಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………..

ಹೊಸದಿಗಂತ ವರದಿ,ಯಾದಗಿರಿ:

ಯಾದಗಿರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ತಡೆಗಟ್ಟಲು ಮೇ 28 ರಿಂದ ಮೇ 23 ರವರಿಗೆ ಸ್ವಯಂಘೊಷಿತ ಬಂದ್ ಗೆ ಜಿಲ್ಲಾ ಉಸ್ತುವಾರಿ ಸಚಿವ ಆರ. ಶಂಕರ್ ಅವರು ಘೋಷಣೆ ಮಾಡಿದರು.
ಅವರು ಭಾನುವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಜಿಲ್ಲೆಯಲ್ಲಿ ಕೊರೋನಾ ತೀವ್ರತೆ ಹೆಚ್ಚಾಗಿದೆ. ಅದಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಅದಕ್ಕಾಗಿ ಜನರಿಗೆ ಮಂಗಳವಾರದವಿರಗೆ ಅವಶ್ಯಕ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು. ಬುಧವಾರ ದಿಂದ ಶುಕ್ರವಾರದವರಿಗೆ ಮೂರುದಿನಗಳ ಕಾಲ ಹಾಗೂ ಶನಿವಾರ ಮತ್ತು ಭಾನುವರ ಸರಕಾರದ ಘೋಷಣೆಯ ಪ್ರಕಾರ ಒಟ್ಟು ಐದು ದಿನ ಸಂಪೂರ್ಣ ಬಂದ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ವ್ಯಾಪಾರಸ್ತರು ತಮ್ಮ ವಹಿವಾಟನ್ನು ಸ್ವಯಂ ಬಂದ ಮಾಡಬೇಕು. ಸರಕಾರದ ಈ ನಿರ್ಧಾರಕ್ಕೆ ಜಿಲ್ಲೆಯ ಸಾರ್ವಜನಿಕರು ಸಹ ಸಹಕಾರ ನೀಡಿ ಯಾರು ಮನೆಯಿಂದ ಹೊರಬರದಂತೆ ಮನವಿ ಮಾಡಿದರು.
ಕೊರೊನಾ ಕುರಿತು ಭಯಬೇಡ. ಸರಕಾರದ ಜಾರಿ ಮಾಡಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜಿಲ್ಲೆಯಲ್ಲಿ ಚಿಕಿತ್ಸೆಗೆ ಬೇಕಾಗುವ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಜನತೆಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ವೆಂಕಟರಡ್ಡಿ ಮುದ್ನಾಳ, ಮಾಜಿ ಸಚಿವ ಬಾಬುರಾವ್ ಚಿಂಚನಸೂರ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ, ಪ್ರಧಾನ ಕಾರ್ಯದರ್ಶಿದ ದೇವಿಂದ್ರನಾಥ ನಾದ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss