ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ಎಂಇಎಸ್ ಮುಖಂಡರ ಜತೆಗೆ ಸೆಲ್ಫಿ ತೆಗೆದುಕೊಂಡ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಸೆಲ್ಫಿ ತೆಗೆದುಕೊಂಡ ಮಾತ್ರಕ್ಕೆ ಕನ್ನಡ ವಿರೋಧಿ ಮನಸ್ಥಿತಿ ಹೊಂದಿದ್ದಾರೆ ಎಂದು ಭಾವಿಸಲಾಗದು. ಕನ್ನಡ ನಾಡಿನ ಬದ್ಧತೆ, ತತ್ವಕ್ಕೆ ವಿರುದ್ಧವಾಗಿ ಹೋಗುವ ಯಾವುದೇ ಅಧಿಕಾರಿ, ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಕನ್ನಡ ನಾಡು, ನೆಲ, ಜಲ, ಭಾಷೆ ರಕ್ಷಣೆ ವಿಷಯದಲ್ಲಿ ಯಾವುದೇ ರಾಜಿ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕನ್ನಡ ರಾಜ್ಯೋತ್ಸವದಂದು ಕಪ್ಪು ಬಟ್ಟೆ ಧರಿಸಿ ಕರಾಳ ದಿನಾಚರಣೆ ಆಚರಿಸಲು ಬಂದಿದ್ದ ಎಂಇಎಸ್ ಮುಖಂಡರ ಜತೆ ಮಾಳ ಮಾರುತಿ ಠಾಣೆಯ ಸಿಪಿಐ ಜಾಕೀರ್ ಪಾಷಾ ಕಾಲಿಮಿರ್ಚಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಎಡವಟ್ಟು ಮಾಡಿಕೊಂಡಿದ್ದರು.

