ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಡಗೋಡ ತಾಲೂಕಿನ ಮಳಗಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿ ಪೊಲೀಸರು ಬಂಧಿಸಿದ್ದಾರೆ.
ಮಳಗಿ ಗ್ರಾಮದ ಮಂಜುಳಾ ಕಲ್ಯಾಣಿ (51) ಬಂಧಿತ ಮಹಿಳೆ.
ಈಕೆಯಿಂದ 10 ಸಾವಿರ ರೂ. ಮೌಲ್ಯದ 250 ಗ್ರಾಂ. ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಮಳಗಿ ಗ್ರಾಮದ ಬಸ್ ನಿಲ್ದಾಣದ ಎದುರಿನ ಸಾರ್ವಜನಿಕ ರಸ್ತೆಯ ಬಳಿ ಈಕೆ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾಳೆ ಎಂಬ ಬಗ್ಗೆ ಬಂದ ಮಾಹಿತಿಯನ್ನು ಬೆನ್ನತ್ತಿದ ಪೊಲೀಸರು ಈ ದಾಳಿ ನಡೆಸಿದ್ದಾರೆ .
ಸಿಪಿಐ ಬಿ.ಎಸ್. ಲೋಕಾಪುರ ನಿರ್ದೇಶನದಂತೆ ಪಿಎಸ್‌ಐ ಹನಮಂತ ಕುಡಗುಂಚಿ ನೇತೃತ್ವದಲ್ಲಿ ಸಿಬ್ಬಂದಿಗಳು
ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ