ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಬಾಡಿಗೆ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಡ್ರಗ್ಸ್ ಸಾಗಿಸುತ್ತಿದ್ದರು. ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ ಮತ್ತು ಎಂಡಿಎಂಎ ಸೇರಿದಂತೆ ಹಲವಾರು ಡ್ರಗ್ಸ್ ಮತ್ತು ವಾಹನವನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳಾದ ಶಾಜಹಾನ್, ಮೊಹಮ್ಮದ್ ನಿಸಾರ್, ಮನ್ಸೂರ್ ಅವರನ್ನು ಬಂಧಿಸಲಾಗಿದ್ದು, ಅವರಿಂದ 2.1 ಲಕ್ಷ ಮೌಲ್ಯದ 42 ಗ್ರಾಂ ಎಂಡಿಎಂಎ ಪತ್ತೆಯಾಗಿದೆ.
ಬಾಡಿಗೆ ವಾಹನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಡ್ರಗ್ಸ್ ಸಾಗಿಸುತ್ತಿದ್ದರು. ಆರೋಪಿಯು ಕರ್ನಾಟಕ ಮತ್ತು ಕೇರಳದ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡಿರುವುದು ಗೊತ್ತಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ. ಈ ಕುರಿತು ಮಂಗಳೂರು ಸೆನ್ ಕೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.