ರಾಜ್ಯ ರಾಜಧಾನಿಯಲ್ಲಿ ಡ್ರಗ್ಸ್ ಮಾರಾಟ: ನೈಜೀರಿಯಾದ ಯುಟ್ಯೂಬರ್‌ ಸೇರಿ ಇಬ್ಬರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಡ್ರಗ್ಸ್ ಮಾರಾಟ ಮಾಡುತ್ತಿದ್ದ  ಯುಟ್ಯೂಬರ್ ಸೇರಿ ಇಬ್ಬರು ನೈಜಿರಿಯಾ ಪ್ರಜೆಗಳನ್ನು ಬೆಂಗಳೂರು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ನೈಜಿರಿಯಾ ದೇಶದ ಓಬೆಜಿ ಜಸ್ಟಿಸ್ ಅಲಿಯಾಸ್ ಎಂಎಂಡಿ ಮೋಲಾ(31) (MMD MOLA) ಮತ್ತು ಸಾಮ್ಯುಯಲ್ (37) ಬಂಧಿತರು.
ಆರೋಪಿಗಳಿಂದ 30 ಸಾವಿರ ರೂ ಮೌಲ್ಯದ 15 ಗ್ರಾಂ ಎಂಡಿಎಂಎ ಕ್ರಿಸ್ಟಲ್, 2 ಮೊಬೈಲ್, 1,200 ರೂ. ನಗದು ಜಪ್ತಿ ಮಾಡಲಾಗಿದೆ.
ಇಬ್ಬರ ವೀಸಾ ಅವಧಿ ಮುಕ್ತಾಯಗೊಂಡು ಒಂದು ವರ್ಷಗಳಾಗಿದ್ದು, ಈ ಹಿಂದೆ ಪೂರ್ವ ವಿಭಾಗದ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ನಗರದಲ್ಲಿಯೇ ಅಕ್ರಮವಾಗಿ ವಾಸವಾಗಿದ್ದರು. ಜೀವನ ನಿರ್ವಹಣೆಗಾಗಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದರು ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ.
ಆರೋಪಿಗಳ ಪೈಕಿ ಓಬೆಜಿ ಜಸ್ಟಿಸ್ ನೈಜಿರಿಯಾದಲ್ಲಿ ಎಂಎಂಡಿ ಮೋಲಾ ಎಂಬ ಹೆಸರಿನಲ್ಲಿ ಪ್ರಖ್ಯಾತ ಯುಟ್ಯೂಬರ್ ಆಗಿದ್ದಾನೆ. ಯುಟ್ಯೂಬ್‌ನಲ್ಲಿ ಎಂಎಂಡಿ ಮೋಲಾ ಹೆಸರಿನಲ್ಲಿ ಹತ್ತಾರು ವಿಚಾರಗಳ ಕುರಿತು ಮಾಹಿತಿ ನೀಡಿದ್ದಾನೆ.
ಕೆ.ಜಿ.ಹಳ್ಳಿ ಠಾಣಾಧಿಕಾರಿ ಸಿ.ಈ.ರೋಹಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಎನ್‌ಡಿಪಿಎಸ್ ಮತ್ತು ವಿದೇಶಿ ನಿಯಮ ಉಲ್ಲಂಘನೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!