ಹೊಸದಿಗಂತ ವರದಿ,ಮಡಿಕೇರಿ:
ಸುಂಟಿಕೊಪ್ಪ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಸುಂಟಿಕೊಪ್ಪ ನಿವಾಸಿ ಕೆ.ಕೆ ಮಧುಸೂದನ್ (32) ಬಂಧಿತ ಆರೋಪಿಯಾಗಿದ್ದು, ಆತನ ಬಳಿ ಇದ್ದ 420 ಗ್ರಾಂ. ಗಾಂಜಾ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ/ಠಾಣೆಗಳಿಗೆ ಸಾರ್ವಜನಿಕರಿಂದ ಬರುತ್ತಿರುವ ಹಿನ್ನೆಲೆಯಲ್ಲಿ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಸುಂಟಿಕೊಪ್ಪ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು.
ಈ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಗುರುವಾರ, ಸುಂಟಿಕೊಪ್ಪ ನಗರದ ರಾಷ್ಟ್ರೀಯ ಹೆದ್ದಾರಿ -275 ರಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದೆ