ಹೊಸದಿಗಂತ ವರದಿ, ಮಡಿಕೇರಿ:
ವೀರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುಂಬಾಡಿ ಜಂಕ್ಷನ್ ಬಳಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಸರಬರಾಜು,ಮಾರಾಟ ಮಾಡುತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಣ್ಣೂರು ಜಿಲ್ಲೆ ಮೂಲದ ನಿವಾಸಿ ನಿಧಿನ್ (28) ಬಂಧಿತ ಆರೋಪಿಯಾಗಿದ್ದು, ಆತನಿಂದ 3 ಕೆಜಿ 90 ಗ್ರಾಂ ಗಾಂಜಾ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ನಿಷೇಧಿತ ಮಾದಕ ವಸ್ತುಗಳ ಮಾರಾಟ,ಸರಬರಾಜು, ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಚಿಸಲಾಗಿದ್ದ ವೀರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್, ವೃತ್ತ ನಿರೀಕ್ಷಕ ಪಿ.ಅನೂಪ್ ಮಾದಪ್ಪ, ವೀರಾಜಪೇಟೆ ನಗರ ಠಾಣೆ ಪಿಎಸ್ಐ ಪ್ರಮೋದ್ ಮತ್ತು ಸಿಬ್ಬಂದಿಗಳ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ತಿಳಿಸಿದ್ದಾರೆ.