Tuesday, August 16, 2022

Latest Posts

ಪ್ಲಾಸ್ಟಿಕ್ ಬಿಂದಿಗೆ ಮಾರುವ ನೆಪದಲ್ಲಿ ಗಾಂಜಾ ಮಾರಾಟ: ಓರ್ವನ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸದಿಗಂತ ವರದಿ,ಚಿಕ್ಕಬಳ್ಳಾಪುರ:

ಪ್ಲಾಸ್ಟಿಕ್ ಬಿಂದಿಗೆ ಮಾರೋ ನೆಪದಲ್ಲಿ ಹಳ್ಳಿ ಹಳ್ಳಿಗೆ ಹೋಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿವೋರ್ವನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಸಿಪಿಐ ಸುರೇಶ್ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆಂಧ್ರ ಮೂಲದ ವೆಂಕಟರಮಣಪ್ಪ, ಪ್ರಕಾಶ್ ಬಂಧಿತರು. ದಿಬ್ಬೂರಹಳ್ಳಿ ಬಳಿ ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದ ಆರೋಪಿಗಳು ಮೂರು ಚಕ್ರದ ಅಪೇ ಗೂಡ್ಸ್ ವಾಹನದ ತುಂಬ ಪ್ಲಾಸ್ಟಿಕ್ ಬಿಂದಿಗೆ ಹಾಗೂ ಸಿಲ್ವರ್ ಆಡುಗೆ ಸಾಮಾನುಗಳನ್ನು ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದರು. ಆದರೆ ಅವರು ಬಿಂದಿಗೆ ಹೆಸರಿನಲ್ಲಿ ಗಾಂಜಾ ವ್ಯಾಪಾರ ಮಾಡುತ್ತಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss