ಸೆಮಿಫೈನಲ್​ ಮ್ಯಾಚ್: ಮತ್ತೆ ಸಿಂಗಲ್​ ಡಿಜಿಟ್​ಗೆ ವಿಕೆಟ್​ ಒಪ್ಪಿಸಿದ ಕೊಹ್ಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟಿ20 ವಿಶ್ವಕಪ್ ನಲ್ಲಿ ಈ ಬಾರಿ ವಿರಾಟ್​ ಕೊಹ್ಲಿ ನಿರಾಸೆ ಮೂಡಿಸಿದ್ದಾರೆ. ಇಂದಿನ ಸೆಮಿಫೈನಲ್​ ಪಂದ್ಯದಲ್ಲಿ ಸಿಂಗಲ್​ ಡಿಜಿಟ್​ಗೆ ವಿಕೆಟ್​ ಒಪ್ಪಿಸಿದ ಕೆಟ್ಟ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ.

ಇಂಗ್ಲೆಂಡ್​ ವಿರುದ್ಧದ ಸೆಮಿ ಪಂದ್ಯದಲ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡಿದ್ದಾರೆ .

2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು. ಜತೆಗೆ ಈ ಬಾರಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಿದ್ದಾರೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದ ಕೊಹ್ಲಿಯ ಮೇಲೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಭಾರೀ ನಿರೀಕ್ಷೆ ಇಡಲಾಗಿತ್ತು. ಆದರೆ ಕೊಹ್ಲಿ ಕಳಪೆ ಬ್ಯಾಟಿಂಗ್​ ಮೂಲಕ ಈ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ. ಆಡಿದ 7 ಪಂದ್ಯಗಳ ಪೈಕಿ 2 ಪಂದ್ಯದಲ್ಲಿ ಶೂನ್ಯ ಸುತ್ತಿದ್ದಾರೆ. ಒಟ್ಟಾರೆ ಅವರ ಗಳಿಕೆ 75 ರನ್​. ಇದರಿಂದ ಕ್ರೀಡಾಭಿಮಾನಿಗಳಿಗೆ ಮತ್ತೆ ನಿರಾಸೆ ಆಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!