Thursday, October 6, 2022

Latest Posts

ಮಹಾ ರಾಜಕೀಯ ಬಿಕ್ಕಟ್ಟು: 5 ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ಅರ್ಜಿ ವರ್ಗಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಎರಡೂ ಬಣದವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪಂಚ ಪೀಠಕ್ಕೆ ವರ್ಗಾವಣೆಯಾಗಿದೆ. ಶಿವಸೇನೆಯ ಏಕನಾಥ ಶಿಂಧೆ ಹಾಗೂ ಉದ್ಧವ್‌ ಠಾಕ್ರೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಐದು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಅರ್ಜಿಗಳನ್ನು ಐದು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿ, ಪ್ರಕರಣವನ್ನು ಆಗಸ್ಟ್ 25 ರಂದು ಪೀಠವು ವಿಚಾರಣೆ ನಡೆಸಲಿದೆ ಎಂದಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ‘ನಿಜವಾದ ಶಿವಸೇನೆ’ ಪಕ್ಷವೆಂದು ಗುರುತಿಸಲು ಮತ್ತು ಅದಕ್ಕೆ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ನಿಗದಿಪಡಿಸಲು ಸಲ್ಲಿಸಿದ ಅರ್ಜಿಯನ್ನು, ಆಗಸ್ಟ್ 25 ರವರೆಗೆ ನಿರ್ಧರಿಸದಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!