Thursday, December 1, 2022

Latest Posts

ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಆರ್.ವೆಂಕಟರಮಣಿ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಆರ್.ವೆಂಕಟರಮಣಿ ಅವರನ್ನು ಬುಧವಾರ ನೇಮಕಮಾಡಲಾಗಿದೆ.
ಅವರು ತಮ್ಮ ಕಚೇರಿಗೆ ಪ್ರವೇಶಿಸಿದ ದಿನದಿಂದ ಮೂರು ವರ್ಷಗಳ ಅವಧಿಗೆ ನೇಮಕಗೊಂಡಿದ್ದಾರೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಭಾರತದ ಮುಂದಿನ ಅಟಾರ್ನಿ ಜನರಲ್ ಆಗಲು ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಹಿರಿಯ ವಕೀಲ ಮುಕುಲ್ ರೋಹಟ್ಗಿ ತಿರಸ್ಕರಿಸಿದ ಮೂರು ದಿನಗಳ ನಂತ್ರ ಹಿರಿಯ ವಕೀಲ ಆರ್. ವೆಂಕಟರಮಣಿ ಅವರನ್ನ ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ನೇಮಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!