ಹೊಸದಿಗಂತ ವರದಿ ಅಂಕೋಲಾ:
ತಾಲೂಕಿನ ಹಿರಿಯ ವಕೀಲ ಸುಭಾಷ ರಮಾಕಾಂತ ನಾರ್ವೇಕರ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ತಾಲೂಕಿನಲ್ಲಿ ಖ್ಯಾತ ವಕೀಲರಾಗಿ ಗುರುತಿಸಿಕೊಂಡಿದ್ದ ಅವರು ಸಾಮಾಜಿಕ ರಂಗದಲ್ಲಿ ಗುರುತಿಸಿಕೊಂಡಿದ್ದರು. ಗೃಹರಕ್ಷಕ ದಳದ ಕಮಾಂಡರ್ ಆಗಿ ಹಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ಶ್ರೀಶಾಂತಾದುರ್ಗಾದೇವಿಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅವರು ಗೋಮಾಂತಕ ಸಮಾಜ ಅಭಿವೃದ್ಧಿ ಸಂಘದ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು.
ಇದನ್ನೂ ಓದಿ:
ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ, ಸದಸ್ಯರಾಗಿ ಹಲವು ವಿದಾಯಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ತಾಲೂಕಿನಲ್ಲಿ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತ ಬಂದಿದ್ದರು. ಮೃತರು ಪತ್ನಿ, ಮಗ, ಮಗಳು, ಅಳಿಯ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.



