Tuesday, March 28, 2023

Latest Posts

ಎರಡನೇ ಅವಧಿಗೆ ಇಂದು ಸಿಎಂ ಕುರ್ಚಿ ಅಲಂಕರಿಸಲಿದ್ದಾರೆ ಮಾಣಿಕ್ ಸಹಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ತ್ರಿಪುರಾದಲ್ಲಿ ಬಿಜೆಪಿಯ ಹಿರಿಯ ನಾಯಕ ಡಾ. ಮಾಣಿಕ್ ಸಹಾ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಮಾರಂಭಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಡಾ.ಸಹಾ ಅವರಿಗೆ ರಾಜ್ಯಪಾಲ ಸತ್ಯದೇವ್ ನಾರಾಯಣ ಆರ್ಯ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.

ತ್ರಿಪುರಾದಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಎರಡನೇ ಅವಧಿಯು ಇಂದಿನಿಂದ ಡಾ. ಮಾಣಿಕ್ ಸಹಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಪ್ರಾರಂಭವಾಗಲಿದೆ. ಇಂದು ಹಲವಾರು ಮಂತ್ರಿಗಳು ಕೂಡ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ, ಕೇಂದ್ರ ಸಚಿವರು, ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಸಮಾಜದ ವಿವಿಧ ಕ್ಷೇತ್ರಗಳ ಜನರ ಸಮ್ಮುಖದಲ್ಲಿ ಮಾಣಿಕ್‌ ಸಹಾ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!