ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿಯನ್ನು ಭೇಟಿಯಾದ ಗೃಹ ಸಚಿವ ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿಯ ಹಿರಿಯ ನಾಯಕ ಲಾಲ್‌ ಕೃಷ್ಣ ಅಡ್ವಾಣಿ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ಮಂಗಳವಾರ) ಭೇಟಿಯಾಗಿದ್ದಾರೆ. ‌

ದೆಹಲಿಯ ನಿವಾಸದಲ್ಲಿ ಅಡ್ವಾಣಿ ಅವರನ್ನು ಭೇಟಿಯಾದ ಅಮಿತ್ ಶಾ, ಭಾರತ ರತ್ನ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉಪಸ್ಥಿತರಿದ್ದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ರಥಯಾತ್ರೆ ನಡೆಸಿ, ಬಿಜೆಪಿ ‘ಹೆಮ್ಮರ’ವಾಗಿ ಬೆಳೆಯಲು ಕಾರಣರಾದ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ಪ್ರಶಸ್ತಿಯನ್ನು ನೀಡಲು ಕೇಂದ್ರ ಸರ್ಕಾರ ಇತ್ತೀಚೆಗೆ ನಿರ್ಧರಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!