ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಹಿರಿಯ ನಾಯಕ , ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬುಧವಾರ ರಾತ್ರಿದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತುರ್ತು ವಿಭಾಗದಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. 96 ವರ್ಷದ ಎಲ್ಕೆ ಅಡ್ವಾಣಿ ಕಳೆದ 2 ವಾರಗಳಲ್ಲಿ ಇದು 2ನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎಲ್ಕೆ ಅಡ್ವಾಣಿ ಅವರಿಗೆ ಅಪೋಲೋ ಆಸ್ಪತ್ರೆಯಲ್ಲಿ ಡಾ. ವಿನಿತ್ ಸೂರಿ ಚಿಕಿತ್ಸೆ ನೀಡಿದ್ದರು. ಇದೀಗ ಅವರ ಆರೋಗ್ಯ ಸುಧಾರಿಸಿದ್ದು, ಸ್ಥಿತಿ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ.