ದೆಹಲಿಯಲ್ಲಿ ಅಮಿತ್ ಶಾ,ನಡ್ಡಾ ಭೇಟಿಯಾದ ಬಿಜೆಪಿ ಹಿರಿಯ ನಾಯಕ ವಿ ಸೋಮಣ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ವಿ ಸೋಮಣ್ಣ (V Somanna) ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಅವರನ್ನು ಶನಿವಾರ ದೆಹಲಿಯಲ್ಲಿ ಭೇಟಿ ಮಾಡಿದರು. ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ .

ಬಿಜೆಪಿ ಹೈಕಮಾಂಡ್ ಜತೆ ಮಾತುಕತೆ ಬಳಿಕ ಆ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಸೋಮಣ್ಣ, ಪಕ್ಷದ ಮುಖ್ಯವಾಹಿನಿಯಲ್ಲಿ ಇರುವಂತೆ ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ. ಅಮಿತ್ ಶಾ, ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ರಾಜ್ಯಸಭಾ ಸ್ಥಾನಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇನೆ. ರಾಜ್ಯದಲ್ಲಿ 3 ಲೋಕಸಭಾ ಕ್ಷೇತ್ರ ಗೆಲ್ಲಿಸಿಕೊಡುವುದಾಗಿ ಹೇಳಿದ್ದೇನೆ ಎಂದರು.

ಕೆಲವೊಂದು ಪ್ರಮುಖ ವಿಚಾರಗಳನ್ನು ನಾನು ಚರ್ಚೆ ಮಾಡಿದ್ದೇನೆ. ಮಾತುಕತೆಯ ಎಲ್ಲಾ ವಿವರಗಳನ್ನು ಈಗ ಬಹಿರಂಗವಾಗಿ ಹೇಳಲಾಗದು. ಶಾ ಭೇಟಿ ಬಹಳ ಸಮಾಧಾನ ತಂದಿದೆ. ನಿಮ್ಮ ಸೇವೆಯನ್ನು ಬಳಸಿಕೊಳ್ಳುವುದಾಗಿ ಅವರು ಹೇಳಿದ್ದಾರೆ ಎಂದು ಸೋಮಣ್ಣ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!