Friday, July 1, 2022

Latest Posts

ಬಾಲಿವುಡ್ ಹಿರಿಯ ನಟಿ ಸೈರಾ ಬಾನು ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಬಾಲಿವುಡ್ ಹಿರಿಯ ನಟಿ ಸೈರಾ ಬಾನು ಮುಂಬೈ ನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ.
ಜುಲೈ 7ರಂದು ಸೈರಾ ಬಾನು ಅವರ ಪತಿ, ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಕೊನೆಯುಸಿರೆಳೆದಿದ್ದರು. ಇದರ ಬೆನ್ನಲ್ಲೇ ಪತ್ನಿ, ನಟಿ ಸೈರಾ ಬಾನು ಅವರ ರಕ್ತದೊತ್ತಡದಲ್ಲಿ ಏರುಪೇರಾಗಿದ್ದು, ಮೂರು ದಿನಗಳ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ.
16 ವರ್ಷ ಇರುವಾಗಲೇ ಜಂಗ್ಲೀ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಸೈರಾ ಬಾನು, ಪಡೋಸನ್, ಹೆರಾ ಫೆರಿ, ದಿನಾನ, ಪುರಬ್ ಔರ್ ಪಶ್ಚಿಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. 22 ವರ್ಷದಲ್ಲಿ ದಿಲೀಪ್ ಕುಮಾರ್ ಅವರನ್ನು ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 54 ವರ್ಷಗಳ ಸುದೀರ್ಘ ಬದುಕು ಸಾಗಿಸಿತ್ತು ಈ ಜೋಡಿ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss