ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಶುಕ್ರವಾರ ಏರುಪೇರಾಗಿದೆ. ತಕ್ಷಣವೇ ಅವರನ್ನು ದಾವಣಗೆರೆಯ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಕಫದ ಸಮಸ್ಯೆಯಿಂದ ಅಸ್ವಸ್ಥರಾಗಿ ಶಾಮನೂರು ಅಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.
94 ವರ್ಷದ ಶಾಮನೂರು ಶಿವಶಂಕರಪ್ಪ, ಹಾಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಚಿಕಿತ್ಸೆ ನಂತರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದೆ. ಯಾವುದೇ ಆತಂಕಪಡುವ ಅಗತ್ಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.