ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ವಾಸು (72) ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ವಾಸು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ಅವರು ನಿಧನ ಹೊಂದಿದ್ದಾರೆ.
ಮೈಸೂರು ಮೇಯರ್ ಆಗಿದ್ದ ವಾಸು ಬಳಿಕ ಶಾಸಕರಾದರು. ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಮಾಲೀಕರಾಗಿರುವ ಇವರು ಪ್ರಜಾನುಡಿ ಪತ್ರಿಕೆ ಮಾಲೀಕರಾಗಿದ್ದರು. ಮೈಸೂರು ನಗರದ ಚಾಮರಾಜ ಕ್ಷೇತ್ರದಲ್ಲಿ 2014ರಲ್ಲಿ ಶಾಸಕರಾಗಿದ್ದ ವಾಸು 2019ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಈ ಬಾರಿ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಟಿಕೆ ಆಕಾಂಕ್ಷಿಯಾಗಿದ್ದರು.