ಹೊಸದಿಗಂತ ಡಿಜಿಟಲ್ ಡೆಸ್ಕ್:
ತೀವ್ರ ಶ್ವಾಸಕೋಶದ ಸೋಂಕಿನಿಂದಾಗಿ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಆರೋಗ್ಯ ಗಂಭೀರವಾಗಿದ್ದು, ಕೃತಕ ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಸಿಪಿಐ ತಿಳಿಸಿದೆ.
72 ವರ್ಷದ ಯೆಚೂರಿ ಅವರನ್ನು ಆಗಸ್ಟ್ 19 ರಂದು ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಏಮ್ಸ್‌ಗೆ ದಾಖಲಿಸಲಾಗಿತ್ತು. ಅವರು ವೆಂಟಿಲೇಟರ್ ನಲ್ಲಿದ್ದು, ವೈದ್ಯರ ತಂಡ ನಿಗಾ ವಹಿಸಿದೆ. ಈ ಸಮಯದಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸಿಪಿಐ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಸೀತಾರಾಂ ಯೆಚೂರಿ ಅವರ ಕಾಯಿಲೆಯ ಸ್ವರೂಪವನ್ನು ಆಸ್ಪತ್ರೆ ಬಹಿರಂಗಪಡಿಸಿಲ್ಲ. ಯೆಚೂರಿ ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.