Saturday, April 1, 2023

Latest Posts

ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯದಲ್ಲಿ ಚೇತರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಚಿತ್ರ ರಂಗದ ಹಿರಿಯ ನಿರ್ದೇಶಕ ಭಗವಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇದೀಗ ಭಗವಾನ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಕಳೆದ ಕೆಲವು ದಿನಗಳ ಹಿಂದೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು ಎಂದು ವೈದ್ಯರು ತಿಳಿಸಿದ್ದರು. ಇದೀಗ ಕೊಂಚ ಚೇತರಿಕೆ ಕಂಡಿದ್ದಾರೆ .
ನಟ, ನಿರ್ದೇಶಕ, ನಿರ್ಮಾಪಕನಾಗಿ ಕನ್ನಡ ಚಿತ್ರರಂಗದಲ್ಲಿ ಭಗವಾನ್ ಗುರುತಿಸಿಕೊಂಡಿದ್ದರು. 89 ವರ್ಷದ ಭಗವಾನ್ ಅವರು ಇತ್ತೀಚೆಗೆ ಶೀತ ಮತ್ತು ಜ್ವರದಿಂದ ಬಳಲುತ್ತಿದ್ದರು.
1966ರಲ್ಲಿ ʻಸಂಧ್ಯಾರಾಗʼ ಸಿನಿಮಾ ಮೂಲಕ ಸಹಾಯಕ ನಿರ್ದೇಶಕರಾಗಿ ಭಗವಾನ್ ಚಿತ್ರರಂಗ ಪ್ರವೇಶಿಸಿದ್ದರು. ಬಳಿಕ ದೊರೈರಾಜ್ ಅವರ ಜೊತೆಗೂಡಿ ಸಾಕಷ್ಟು ಸಿನಿಮಾಗಳನ್ನ ನಿರ್ದೇಶನ ಮಾಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!