October 12, 2026
Monday, October 12, 2026
spot_img

ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಹಿರಿಯ ವೈದ್ಯ ಡಾ.ಡಿ ಎಲ್ ಭಟ್ಕಳ

ಹೊಸದಿಗಂತ ವರದಿ ಅಂಕೋಲಾ :

ಕೆ ಎಲ್ ಇ ಸಮೂಹ ಸಂಸ್ಥೆಯ ಕಾರ್ಯದರ್ಶಿ ಹಿರಿಯ ವೈದ್ಯರಾಗಿದ್ದ ಡಾ.ಡಿ ಎಲ್ ಭಟ್ಕಳ (79) ಅವರು ಬೆಳಗಾವಿಯ ತಮ್ಮ ಮನೆಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಂಕೋಲಾ ಕೆ.ಎಲ್.ಇ ಸಮೂಹ ಸಂಸ್ಥೆಯ ಆಡಳಿತಾಧಿಕಾರಿಯಾಗಿ ಪ್ರಭಾಕರ ಕೋರೆ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಇಬರು ನಿರಂತರ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದರು.ಇವರು ಕೆಲ ದಿನಗಳ ಹಿಂದಷ್ಟೇ ಬೆಳಗಾವಿಗೆ ಸ್ಥಳಾಂತರಗೊಂಡಿದ್ದರು.

ಬೆಳಿಗ್ಗೆ ಮನೆಯ ಬಾಲ್ಕನಿಯಲ್ಲಿ ಇವರು ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿ ಜನ ಓಡಿ ಬರುವಷ್ಟರಲ್ಲಿ ಪ್ರಾಣಪಕ್ಷಿ ಹಾರಿಹೋಗಿತ್ತು. ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಡಾ. ಭಟ್ಕಳ ಇದರಿಂದ ಮನನೊಂದಿರಬಹುದೆಂದು ಶಂಕಿಸಲಾಗಿದೆ.

ಪತ್ನಿ ಡಾ. ಸಾಧನಾ ಭಟ್ಕಳ ಅವರು ಅಂಕೋಲಾದಲ್ಲಿ ವೈದ್ಯರಾಗಿ ಹೆಸರು ಮಾಡಿದ್ದಾರೆ. ಬೆಳಗಾವಿ ಟಿಳಕವಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

Must Read