ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ಐಪಿಎಸ್ ಅಧಿಕಾರಿ ಬಿ.ದಯಾನಂದ್ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. 2022ನೇ ಸಾಲಿನ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಘೋಷಿಸಲಾದ ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ ದಯಾನಂದ್ ಭಾಜನರಾಗಿದ್ದಾರೆ.
ಇತ್ತೀಚೆಗೆ ಬೆಂಗಳೂರಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪ ಆರೋದಲ್ಲಿ ದಯಾನಂದ್ ಅಮಾನತುಗೊಂಡಿದ್ದರು. ಅವರು ಅಮಾನತಾದ ಸ್ಥಾನಕ್ಕೆ ನಗರ ಪೊಲೀಸ್ ಆಯುಕ್ತರಾಗಿ ಸೀಮಂತ್ ಕುಮಾರ್ ಸಿಂಗ್ ನಿಯೋಜನೆಗೊಂಡಿದ್ದರು.