ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರರಾವ್ ( 75) ಅವರು ಬೆಂಗಳೂರಿನಲ್ಲಿಇಂದು ನಿಧನರಾಗಿದ್ದಾರೆ. ಎರಡು ವರ್ಷದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮುಖೇನ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಬೆಂಗಳೂರಿನ ಬನ್ನೇರಘಟ್ಟ ರಸ್ತೆಯಲ್ಲಿರುವ ಸೌತ್ ಸಿಟಿ ಅಪಾರ್ಟ್ ಮೆಂಟ್ ಗೆ ಪಾರ್ಥಿವ ಶರೀರವನ್ನು ತರಲಾಗಿದ್ದು, ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮೂಲತಃ ಶಿರಸಿ ತಾಲ್ಲೂಕಿನವರಾದ ಎಂ.ಕೆ.ಭಾಸ್ಕರರಾವ್ ಅವರು ಬೆಳೆದಿದ್ದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ. ಅಲ್ಲಿಯೇ ಶಿಕ್ಷಣ ಮುಗಿಸಿ ನಂತರ ಪತ್ರಿಕೋದ್ಯಮ ಸೇರಿದವರು. ಪ್ರಜಾವಾಣಿ ಪತ್ರಿಕೆಯಲ್ಲಿಯೇ ಮೂರು ದಶಕಕ್ಕೂ ಅಧಿಕ ಕಾಲ ಕೆಲಸ ಮಾಡಿದ್ದರು.
ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ ರಾವ್ ಅವರ ನಿಧನದಿಂದ ದು:ಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
ಪ್ರಜಾವಾಣಿಯ ದಿನಗಳಿಂದಲೂ ನಾನು ಬಲ್ಲ ಭಾಸ್ಕರ ರಾವ್ ನಿವೃತ್ತಿಯ ನಂತರವೂ ಪತ್ರಕರ್ತನಾಗಿ ಸಕ್ರಿಯರಾಗಿದ್ದರು. ತನ್ನ ಸೌಜನ್ಯಭರಿತ ನಡವಳಿಕೆಯಿಂದ ಎಲ್ಲರಿಗೂ ಆತ್ಮೀಯರಾಗಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/59FRb8wp1x
— Siddaramaiah (@siddaramaiah) April 3, 2024