ಕನ್ನಡ ಡಿಜಿಟಲ್ ಮಾಧ್ಯಮದ ಹರಿಕಾರ ಎಸ್‌.ಕೆ. ಶ್ಯಾಮಸುಂದರ್‌ ನಿಧನ; ಸಿಎಂ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್( 72) ನಿಧನರಾಗಿದ್ದಾರೆ. ಬೆಂಗಳೂರಿನ ದಿಗ್ವಿಶ್ ಆಸ್ಪತ್ರೆಯ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಡಿಜಿಟಲ್‌ ಮಾಧ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿ, ಸಾಕಷ್ಟು ಪತ್ರಕರ್ತರಿಗೆ ಗುರುವಾಗಿದ್ದ ಶ್ಯಾಮಸುಂದರ್‌ ನಿಧನಕ್ಕೆ ಪತ್ರಕರ್ತರು ಕಂಬನಿ ಮಿಡಿದಿದ್ದಾರೆ. ಶ್ಯಾಮಸುಂದರ್‌ ಅಕ್ಷರವನ್ನೇ ಜೀವನವನ್ನಾಗಿಸಿಕೊಂಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘಕಾಲ ಪತ್ರಕರ್ತರಾಗಿ ದುಡಿದವರು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕರ್ನಾಟಕ ಮುಖ್ಯಮಂತ್ರಿಗಳು ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.

ಎಸ್.ಕೆ. ಶ್ಯಾಮಸುಂದರ್ ಸುಮಾರು 39 ವರ್ಷಗಳ ಕಾಲ ಕನ್ನಡ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು. ಈ ಅವಧಿಯಲ್ಲಿ ಅವರು ಕನ್ನಡ ಪತ್ರಿಕೋದ್ಯಮಕ್ಕೆ, ಅದರಲ್ಲೂ ವಿಶೇಷವಾಗಿ ಡಿಜಿಟಲ್ ಪತ್ರಿಕೋದ್ಯಮ ವಲಯಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ಕನ್ನಡ ಡಿಜಿಟಲ್ ಮಾಧ್ಯಮ ಲೋಕದ ಭೀಷ್ಮ ಎಂದೇ ಖ್ಯಾತರಾಗಿದ್ದ ಅವರು ಅನೇಕ ಪ್ರಶಸ್ತಿಗಳಿಗೂ ಭಾಜನರಾಗಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!