ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಬಿಜೆಪಿಯ ಹಿರಿಯ ನಾಯಕ ಪಿ.ಪಿ ಮುಕುಂದನ್ ಅವರು ಇಂದು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮುಕುಂದನ್ ಅವರಿಗೆ 77 ವರ್ಷವಾಗಿದ್ದು, ವಯೋಸಹಜ ಸಮಸ್ಯೆಗಳನ್ನು ಎದುರಿಸಿದ್ದರು. ಉಸಿರಾಟದ ಸಮಸ್ಯೆ ಹೆಚ್ಚಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ನಾಳೆ ಕಣ್ಣೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದರು, ಬಹಳ ಸಮಯದವರೆಗೂ ಕೇರಳದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು. ಅಷ್ಟೇ ಅಲ್ಲದೆ ಮಾಧ್ಯಮ ಕ್ಷೇತ್ರದಲ್ಲೂ ಛಾಪು ಮೂಡಿಸಿದ್ದು, ಜನ್ಮಭೂಮಿ ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದರು.