ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ಇಂದು ನಿಧನರಾಗಿದ್ದಾರೆ.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಾಹಿತಿ, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಮೃತ ನಾ.ಡಿಸೋಜ ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.