ತ್ರಿಪುರಾದ ಹಿರಿಯ ಸಚಿವ ನರೇಂದ್ರ ಚಂದ್ರ ದೆಬ್ಬರ್ಮಾ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತ್ರಿಪುರಾದ ಹಿರಿಯ ಸಚಿವ ಮತ್ತು ಬಿಜೆಪಿಯ ಮಿತ್ರಪಕ್ಷ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ (IPFT) ಅಧ್ಯಕ್ಷ ನರೇಂದ್ರ ಚಂದ್ರ ದೆಬ್ಬರ್ಮಾ ಅವರು ನಿಧನರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದ ನಂತರ ಭಾನುವಾರ ನಿಧನರಾದರು ಎಂದು ಕುಟುಂಬ ಮತ್ತು ಆಸ್ಪತ್ರೆ ಮೂಲಗಳು ತಿಳಿಸಿವೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಡಿಸೆಂಬರ್ 30 ರಂದು ದೆಬ್ಬರ್ಮಾ ಅವರು ತೀವ್ರ ಬ್ರೈನ್ ಸ್ಟ್ರೋಕ್ಗೆ ಒಳಗಾಗಿದ್ದರು. ಇವರು ಸರ್ಕಾರಿ ಗೋವಿಂದ್ ಬಲ್ಲಭ್ ಪಂತ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದರು.

ಮಾರ್ಚ್ 2018 ರಲ್ಲಿ ಸಿಪಿಐ-ಎಂ ನೇತೃತ್ವದ ಎಡರಂಗವನ್ನು ಸೋಲಿಸಿ ಬಿಜೆಪಿ-ಐಪಿಎಫ್‌ಟಿ ಮೈತ್ರಿ ಸರ್ಕಾರವನ್ನು ಸ್ಥಾಪಿಸುವಲ್ಲಿ ಅವರು ಬಹಳ ಮಹತ್ವದ ಪಾತ್ರವನ್ನು ವಹಿಸಿದ್ದರು.

ಕಂದಾಯ ಮತ್ತು ಅರಣ್ಯ ಇಲಾಖೆಗಳನ್ನು ನಿರ್ವಹಿಸಿರುವ ದೆಬ್ಬರ್ಮಾ ಅವರು ನಾಲ್ವರು ಪುತ್ರರು, ಮೂವರು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!