ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌ಶ್ರೀನಿವಾಸ್ (86) ನಿಧನರಾಗಿದ್ದಾರೆ.
ನನ್ನ ತಂದೆ ಕೆ.ಎಚ್. ಶ್ರೀನಿವಾಸ್ ಅವರು ಇನ್ನಿಲ್ಲ. ಅವರು ಇಂದು ಬೆಳಗ್ಗೆ 11 ಗಂಟೆಗೆ ನಮ್ಮ ನಿವಾಸದಲ್ಲಿ ನಿಧನರಾದರು. ಅಪಾರ ದುಃಖದಿಂದ ನನಗಾದ ದೊಡ್ಡ ನಷ್ಟದ ಬಗ್ಗೆ ನಾನು ನಿಮಗೆ ತಿಳಿಸುತ್ತೇನೆ ಎಂದು ಶ್ರೀನಿವಾಸ್ ಪುತ್ರಿ ವೈಶಾಲಿ ದುಃಖ ಹಂಚಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನುಗೋಡು ಗ್ರಾಮದಲ್ಲಿ 1938ರ ಫೆಬ್ರವರಿ 5ರಂದು ಜನಿಸಿದರು. ಸಾಗರ, ಶಿವಮೊಗ್ಗದಲ್ಲಿ ಶಿಕ್ಷಣ ಪಡೆದಿದ್ದರು. ಕೃಷಿಕರಾಗಿ, ವಕೀಲರಾಗಿದ್ದುಕೊಂಡೇ ರಾಜಕೀಯ ಪ್ರವೇಶಿಸಿದ್ದರು. ಕೆಲವು ದಿನಗಳ ಕಾಲ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು.
ಹೈಕೋರ್ಟ್‌ನಲ್ಲಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು. ಹಲವಾರು ಸಾಮಾಜಿಕ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಕಾನೂನು ಸಲಹೆಗಾರರಾಗಿ ನೇಮಕಗೊಂಡು ಸಾಮಾಜಿಕವಾಗಿ ಗುರುತಿಸಿಕೊಂಡಿದ್ದರು. ಸಾಗರ ತಾಲೂಕು ಮತ್ತು ಸುತ್ತಮುತ್ತ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದಲ್ಲಿ ಅಧ್ಯಕ್ಷರಾಗಿ ಹಾಗೂ ಶಿವಮೊಗ್ಗದ ಸಹ್ಯಾದ್ರಿ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನುಗೋಡು ಗ್ರಾಮದಲ್ಲಿ1938ರ ಫೆಬ್ರವರಿ 5ರಂದು ಜನಿಸಿದರು ಕೆ.ಎಚ್.ಶ್ರೀನಿವಾಸ್. ಸಾಗರ, ಶಿವಮೊಗ್ಗದಲ್ಲಿ ಶಿಕ್ಷಣ ಪಡೆದಿದ್ದರು.ಕೃಷಿಕರಾಗಿ, ವಕೀಲರಾಗಿದ್ದುಕೊಂಡೇ ರಾಜಕೀಯ ಪ್ರವೇಶಿಸಿದ್ದರು. ಕೆಲವು ದಿನಗಳ ಕಾಲ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಹೈಕೋರ್ಟ್‌ನಲ್ಲಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು. ಹಲವಾರು ಸಾಮಾಜಿಕ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಕಾನೂನು ಸಲಹೆಗಾರರಾಗಿ ನೇಮಕಗೊಂಡು ಸಾಮಾಜಿಕವಾಗಿ ಗುರುತಿಸಿಕೊಂಡರು.