ಹೊಸದಿಗಂತ ವರದಿ, ಮಂಗಳೂರು:
ಆರೆಸ್ಸೆಸ್‌ನ ಹಿರಿಯ ಸ್ವಯಂಸೇವಕ, ಬಿಜೆಪಿಯ ಹಿರಿಯ ನಾಯಕ, ಉಡುಪಿ ಜಿಲ್ಲೆಯ ಖ್ಯಾತ ಉದ್ಯಮಿ ಎಂ . ಸೋಮಶೇಖರ್ ಭಟ್ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ಶಾಸಕರಾದ ಸುನೀಲ್ ಕುಮಾರ್, ಕಿರಣ್ ಕೊಡ್ಗಿ,ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ , ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ, ಮಾಜಿ ಶಾಸಕ ರಘುಪತಿ ಭಟ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ.