ಆರ್‌ಎಸ್‌ಎಸ್‌ನ ಹಿರಿಯ ಕಾರ್ಯಕರ್ತ ಪಾಂಡುರಂಗ ಶಾನುಭಾಗ್ ನಿಧನ: ಪೇಜಾವರ ಶ್ರೀ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸಕ್ರಿಯ ಕಾರ್ಯಕರ್ತ , ರಾಷ್ಟ್ರಭಕ್ತ ಉಡುಪಿಯ ಪಾಂಡುರಂಗ ಶಾನುಭಾಗ್ ಅವರು ಭಾನುವಾರ ಮಧ್ಯಾಹ್ನ ಅಯೋಧ್ಯೆ ರಾಮಮಂದಿರದ ಸಮೀಪ ಹೃದಯಾಘಾತದಿಂದ ನಿಧನ ಹೊಂದಿದ್ದು, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರು ಸಂತಾಪ ಸೂಚಿಸಿದ್ದಾರೆ.

ಅವರ ಆತ್ಮಕ್ಕೆ ರಾಮನು ಸದ್ಗತಿಯನ್ನು ಕರುಣಿಸಲಿ ಎಂದು ಪೇಜಾವರ ಶ್ರೀಗಳು ಪ್ರಾರ್ಥಿಸಿದ್ದಾರೆ .

ಪಾಂಡುರಂಗ ಶಾನುಭಾಗರಿಗೆ ಅಯೋಧ್ಯೆಯಲ್ಲಿ ಪೇಜಾವರ ಶ್ರೀಗಳು ಇಂದು ಬೆಳಿಗ್ಗೆ ಸಂತೋಷದಿಂದ ತೀರ್ಥಪ್ರಸಾದ ನೀಡಿ, ಸಂಸ್ಕೃತದಲ್ಲೇ ಸಂಭಾಷಣೆ ನಡೆಸಿ ಕುಶಲೋಪರಿ ನಡೆಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!