Sunday, October 2, 2022

Latest Posts

ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಜಿ ಎಸ್.ಪಿ.ಉಮರ್ ಫಾರೂಕ್ ನಿಧನ

ಹೊಸದಿಗಂತ ವರದಿ ಪಡುಬಿದ್ರಿ :

ಪರಿಸರದ ಹಿರಿಯ ಸಾಮಾಜಿಕ ಕಾರ್ಯಕರ್ತ ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕಂಚಿನಡ್ಕ ಎಸ್.ಪಿ. ಕಂಪೌಂಡ್ ನಿವಾಸಿ ಹಾಜಿ ಎಸ್.ಪಿ.ಉಮರ್ ಫಾರೂಕ್ (60) ಅಲ್ಪಕಾಲದ‌ ಅನಾರೋಗ್ಯದಿಂದ ನಿಧನ ಹೊಂದಿದರು.
ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಸಂಘಟನೆಗಳಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸುತಿದ್ದ ಇವರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ, ಪಡುಬಿದ್ರಿ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾಗಿ, ಉಡುಪಿ ಜಿಲ್ಲಾ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ ಜಿಲ್ಲಾಧ್ಯಕ್ಷರಾಗಿ, ಎಸ್ ವೈಎಸ್ ಪಡುಬಿದ್ರಿ ಘಟಕದ ಮಾಜಿ ಅಧ್ಯಕ್ಷರಾಗಿ, ಪಡುಬಿದ್ರಿ ಜುಮಾ ಮಸೀದಿ ಸದಸ್ಯರಾಗಿ, ಇ ಅನತುಲ್ ಮಸಾಕೀನ್ ಮಾಜಿ ಅಧ್ಯಕ್ಷರಾಗಿದ್ದರು.
ಕನತಾದಳದಲ್ಲಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದ ಇವರು ಇತ್ತೀಚೆಗೆ ಕಾಂಗ್ರೆಸ್ ಗೆ ಸೇರರ್ಪಡೆಗೊಂಡಿದ್ದರು.
ಪತ್ನಿ, ಮೂರು ಹೆಣ್ಣ, ಒಂದು ಗಂಡು ಮಕ್ಕಳನ್ನು ಅಗಲಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!